ಇತ್ತೀಚಿನ ಸುದ್ದಿ
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜ ಆಗ್ರಹ
23/07/2023, 18:56
ಬೆಳ್ತಂಗಡಿ(reporterkarnataka.com): ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಮರು ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ ಅವರು ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ನಡೆದು 11 ವರ್ಷಗಳ ಬಳಿಕ ಆಪಾದಿತ ಸಂತೋಷ್ ರಾವ್ ಅವರನ್ನು ಸಿಬಿಐ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದ ಬಳಿಕ ಸಾರ್ವಜನಿಕ ವಲಯದಲ್ಲಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಮಾಡಿದ ನಿಜವಾದ ಆರೋಪಿಗಳನ್ನು ಬಂಧಿಸಲು ಪ್ರಕರಣದ ಮರು ತನಿಖೆ ನಡೆಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸೇರಿದಂತೆ ನಾನಾ ಕಡೆಗಳಲ್ಲಿ ಸೌಜನ್ಯಾ ಪರ ಪ್ರತಿಭಟನೆಗಳು ನಡೆಯುತ್ತಿವೆ. ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಪ್ರಕರಣದ ಮರು ತನಿಖೆ ನಡೆಸುವಂತೆ ಸರಕಾರವನ್ನು ಎಚ್ಚರಿಸಲಾಗಿದೆ. ಇದೀಗ
ಪ್ರಕರಣದ ಕುರಿತು ದೀರ್ಘಕಾಲದಿಂದ ಮೌನ ವಹಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.