ಇತ್ತೀಚಿನ ಸುದ್ದಿ
ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಣೆ! ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ
24/07/2023, 19:21
ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜೆಲ್ಲೆಗಳಾದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ ಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಇಂದು ಭಾರಿಯಿಂದ ಅತೀ ಭಾರೀ 204.4 ಎಂಎಂ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ, ಫಲ್ಗುಣಿ ಸೇರಿದಂತೆ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಿದೆ.
ಘಟ್ಟ ಪ್ರದೇಶ ಹಾಗೂ ಕರಾವಳಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಪಯಸ್ವಿಣಿ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದೆ. ನೇತ್ರಾವತಿ, ಕುಮಾರಧಾರಾ ಮತ್ತು ಫಲ್ಗುಣಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮಂಗಳೂರು ನಗರದಲ್ಲೂ ಗಾಳಿ ಮಳೆಗೆ ಕಳೆದ ಎರಡು ದಿನಗಳಿಂದ ಹಲವು ಮರಗಳು ಧರಾಶಾಹಿಯಾಗಿವೆ. ಲಾಲ್ ಬಾಗ್ ಬಳಿ ಫ್ಲೆಕ್ಸ್ ಮುರಿದು ಬಿದ್ದಿದೆ.
ಬಜಾಲ್ ಸಮೀಪ ಗಾಳಿ ಮಳೆಗೆ ಹೋಟೆಲ್ ಮೇಲೆ ಸೋಮವಾರ ಬೆಳಗ್ಗೆ ಮರ ಬಿದ್ದು ವಿದ್ಯುತ್ ಕಂಬಗಳ ತಂತಿಗೆ ಹಾನಿಯಾಗಿದ್ದು, ಸುತ್ತ ಮುತ್ತ ವಿದ್ಯುತ್ ಸಂಪರ್ಕ ಬೆಳಗಿನಿಂದ ಕಡಿತಗೊಂಡಿದೆ. ಮಳೆಯನ್ನು ಲೆಕ್ಕಿಸದೆ ಲೈನ್ ಮ್ಯಾನ್ ಕಂಬ ಹತ್ತಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.