ಇತ್ತೀಚಿನ ಸುದ್ದಿ
ಕರಾವಳಿಯಲ್ಲಿ ಮತ್ತೆ ಅವ್ಯಾಹತ ಮಳೆ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆ
24/07/2023, 20:09
ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ, ಫಲ್ಗುಣಿ ಸೇರಿದಂತೆ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸ್ನಾನಘಟ್ಟ ಮುಳುಗಿದೆ.
ಘಟ್ಟ ಪ್ರದೇಶ ಹಾಗೂ ಕರಾವಳಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಪಯಸ್ವಿಣಿ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದೆ. ನೇತ್ರಾವತಿ, ಕುಮಾರಧಾರಾ ಮತ್ತು ಫಲ್ಗುಣಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸುಳ್ಯದಲ್ಲಿ ಪಯಸ್ವಿನಿ, ಗುರುಪುರದಲ್ಲಿ ಫಲ್ಗುಣಿ, ಕಟೀಲಿನಲ್ಲಿ ನಂದಿನಿ ಹಾಗೂ ಮುಲ್ಕಿಯಲ್ಲಿ ಶಾಂಭವಿ ನದಿ ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶ ಜಲಾವೃತವಾಗಿದೆ.