1:01 PM Friday17 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಸೆಪ್ಟೆಂಬರ್ 15ರ ವರೆಗೆ ನಿಷೇಧ

26/07/2023, 23:16

ಕಾರ್ಕಳ(reporterlarnataka.com): ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆ ಮತ್ತು ಭಾರೀ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ಧಾರಿ 169 A ಯ ಆಗುಂಬೆ ಘಾಟಿಯ 6,7 ಮತ್ತು 11 ನೇ ತಿರುವಿನಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಆತಂಕ ಉಂಟಾಗಿದೆ. ಹೀಗಾಗಿ ಜುಲೈ 27 ರಿಂದ ಸೆಪ್ಟೆಂಬರ್‌ 15 ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಾರ್ಗ 1. ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್‌- ಕಾರ್ಕಳ- ಉಡುಪಿ ಮಾರ್ಗ 2. ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ ಬಳಸಬಹುದಾಗಿದೆ ‌ಎಂದು ಆದೇಶ ದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು