ಇತ್ತೀಚಿನ ಸುದ್ದಿ
ಕರಿಮಣಿ ಸರ ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ
28/07/2023, 11:14
ಮಂಗಳೂರು(reporterkarnataka.com): ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕರಿಮಣಿ ಸರ ಕುಸಿದು ಸುಲಿಗೆ ಮಾಡಿದ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
2000, ಡಿಸೆಂಬರ್ 17ರಂದು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹುಸೇನ್ ಅಲಿಯಾಸ್ ಮೊಹಮ್ಮದ್ ಹುಸೇನ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರ ಮೇಲೆ ಕೇಸು ದಾಖಲಿಸಿ ಬಂಧಿಸಲಾಗಿತ್ತು. ಇನ್ನೊರ್ವ ಆರೋಪಿ ಉಳ್ಳಾಲದ
ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಜುಲೈ 26ರಂದು ಆರೋಪಿಯನ್ನು ಮೇಲಾಧಿಕಾರಿಗಳ ಸೂಕ್ತ ಮಾರ್ಗದರ್ಶನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.