ಇತ್ತೀಚಿನ ಸುದ್ದಿ
12ರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ; ಆರೋಪಿ ಬಂಧನ
30/07/2023, 13:25
ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯ ಮೇಲೆ pನಿರಂತರ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ಪೋಕ್ಸ ಪ್ರಕರಣ ದಾಖಲಿಸಲಾಗಿದೆ.
8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕಿಯ ಮೇಲೆ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಎಂಬಾತ ಜನವರಿ ತಿಂಗಳಿನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅತ್ಯಾಚಾರ ನಡೆಸಿದ್ದ. ನಂತರ ಬಾಲಕಿ ಒಬ್ಬಳೇ ಇದ್ದಾಗ ಬಂದು ಅತ್ಯಾಚಾರ ನಡೆಸುತ್ತಿದ್ದ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು ಬಾಲಕಿಯ ತಾಯಿ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅ.ಕ್ರ 58/2023 ಕಲಂ 376, 448, 506 ಐಪಿಸಿ ಮತ್ತು 6 ಪೋಕ್ಸ್ ಕಾಯ್ದೆಯಂತೆ ಕೇಸು ದಾಖಲಾಗಿದ್ದು, ಆರೋಪಿ ಶಾಫಿಯನ್ನು
ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಮತ್ತು ಉಳ್ಳಾಲ ಪೊಲೀಸ್ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಪ್ರಕರಣದ ತನಿಖೆಯನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ ಲೋಕೇಶ್ ಎ.ಸಿ. ಅವರು ನಡೆಸುತ್ತಿದ್ದಾರೆ.