5:56 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸೇವ್ ಲೈಫ್  ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ವೆನಲಾಕ್ ಆಸ್ಪತ್ರೆಗೆ ಹಸ್ತಾಂತರ

15/05/2021, 19:41

ಮಂಗಳೂರು(reporterkarnataka news) : ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು . 

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ . ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ . ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಭಗಳಿಗೆ ಅಗತ್ಯ ವಸ್ತುಗಳ ಕಿಟ್  ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ . ಈ ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ ನೀವು ತಮ್ಮ ಸಂಸ್ಥೆಯ ವತಿಯಿಂದ ಸಾರ್ವಜಿಕರಿಗೆ ಉಪಯೋಗವಾಗುವಂತಹ ಸೇವಾ ಕಾರ್ಯ ಮೆಚ್ಚು ವಂಥದದ್ದು , ನೀವು ನೀಡಿದ ರೀತಿಯಂತೆ ಇನ್ನು ಸಾರ್ವಜನಿಕ ಸೇವಾ ಸಂಸ್ಥೆಗಳು ಮುಂದೆ ಬರುವಂತೆ ಆಗಲಿ ಎಂದು ಶುಭ ಹರಿಸಿದರು , ಬಳಿಕ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಡಿ ಎಂ ಓ ರವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು