12:51 PM Tuesday11 - March 2025
ಬ್ರೇಕಿಂಗ್ ನ್ಯೂಸ್
Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ…

ಇತ್ತೀಚಿನ ಸುದ್ದಿ

ಪ್ರಜಾಪ್ರಭುತ್ವ ವ್ಯವಸ್ಥೆ ಬಲವರ್ಧನೆಗೆ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ. ಖಾದರ್

31/07/2023, 19:02

ಮಂಗಳೂರು(reporterkarnataka.com): ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣ ಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಅವರು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಾಧ್ಯಮ ಸಂವಾದ ಗೋಷ್ಠಿ ಯನ್ನು ದ್ದೇಶಿಸಿ ಮಾತನಾಡಿದರು.
ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ.ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲವಾಗಲಿದೆ ಎಂದು ಖಾದರ್ ತಿಳಿಸಿದರು.


ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠ ಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು. ಆಗ ಉತ್ತಮ ಶಾಸನಗಳು ಜಾರಿಯಾಗಬಹುದು. ವಿಧಾನ ಸಭಾ ಕಲಾಪ ವ್ಯರ್ಥ ವಾಗದಂತೆ ನಿಭಾ ಯಿಸುವ ಹೊಣೆಗಾರಿಕೆ ಇದೆ ಎಂದು ಅವರು ನುಡಿದರು.
ಸರಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ಪೀಕರ್ ನ ಪಾತ್ರವೂ ಮಹತ್ವದ್ದಾಗಿದೆ ಎಂದು ಖಾದರ್ ಅಭಿಪ್ರಾಯಪಟ್ಟರು.
ಸದನದಲ್ಲಿ ಪರಸ್ಪರ ಆರೋಪ ಸಹಜ ಒಂದು ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ. ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲ ವಾಗುತ್ತದೆ. ಸದನದಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿರುವುದಾಗಿ ತಿಳಿಸಿದರು.
ಮಾಧ್ಯಮ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್ ಉಪಸ್ಥಿತರಿದ್ದರು. ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು