12:49 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ: 3 ಮಂದಿ ಆರೋಪಿಗಳ ಬಂಧನ; 1.36 ಲಕ್ಷ ಮೌಲ್ಯದ ಸೊತ್ತು ವಶ

31/07/2023, 22:23

ಮಂಗಳೂರು(reporterkarnataka.com): ನಗರದ ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳೂರು ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಣೇಶ್, ರಾಹುಲ್ ಗಟ್ಟಿ ಮತ್ತು ಅಭಿಲಾಷ್ ಕರ್ಕೇರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು
ಆಟೋರಿಕ್ಷಾದಲ್ಲಿ ಗಾಂಜಾ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಈ ಮೂವರನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ 2 ಕೆಜಿ 133 ಗ್ರಾಂ ಗಾಂಜಾ ಮತ್ತು ಗಾಂಜಾ ಮಾರಾಟಕ್ಕೆ ಬಳಕೆ ಮಾಡುತ್ತಿದ್ದ ಆಟೋ ರಿಕ್ಷಾ (ಸಂಖ್ಯೆ-ಕೆಎ19 ಎಎ2906) ಹಾಗೂ 3 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂದಾಜು 1.36 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯಿದೆಯಡಿ ಪ್ರಕರಣದ ದಾಖಲಿಸಿ ತನಿಖೆ ನಡೆಯುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಆಯುಕ್ತ
ಕುಲದೀಪ್ ಕುಮಾರ್ ಆರ್ ಜೈನ್
ನೇತೃತ್ವದಲ್ಲಿ ಡಿಸಿಪಿ (ಕಾ& ಸು) ಅಂಶು ಕುಮಾರ್,
ಡಿಸಿಪಿ (ಅಪರಾಧ & ಸಂಚಾರ) ದಿನೇಶ್ ಕುಮಾರ್ ಹಾಗೂ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ್ದು ಬರ್ಕೆ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಎಸ್ ಹಸ್ತ‌, ರೇಖಾ ಆರ್
ಪಿಎಸ್‌ಐ, ಶೋಭಾ ಪಿ.ಎಸ್.ಐ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು