ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ
02/08/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು
ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರವಾಸಿಗರು ರಸ್ತೆಯಲ್ಲೇ ಮೋಜು ಮಸ್ತಿ ಮಾಡಿ
ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ರೋಗಿ ಹೊತ್ತ ಆಂಬುಲೆನ್ಸ್ ಕೂಡ ಮುಂದೆ ಸಾಗಲು ಪರದಾಟ ನಡೆಸಬೇಕಿತ್ತು.
ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ. ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಹಾಗಾಗಿ
ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇಡೀ ದಿನ ಸ್ಥಳದಲ್ಲೇ ಪೊಲೀಸರು
ಮೊಕ್ಕಾಂ ಹೂಡಲಿದ್ದಾರೆ.