10:05 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

03/08/2023, 20:26

ಬೆಂಗಳೂರು(reporterkarnataka.com): ರಾಜ್ಯದ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರನ್ನು ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್(ಕೆಪಿಎಫ್‍ಬಿಎ)ನ ಪ್ರತಿನಿಧಿಗಳು ಭೇಟಿ ಮಾಡಿ, ರಾಜ್ಯದ ಕುಕ್ಕುಟೋದ್ಯಮ ಕ್ಷೇತ್ರದ ಸಮಸ್ಯೆಗಳ ಕುರಿತು ಮನವರಿಕೆ ಮಾಡಿದ್ದು, ಸಚಿವರು ಇದಕ್ಕೆ ಪೂರಕವಾಗಿ ಸ್ಪಂದಿಸುವ ಜತೆಗೆ ಸಮಸ್ಯೆ ಪರಿಹಾರಕ್ಕೆ ಭರವಸೆಯನ್ನು ನೀಡಿದರು.
ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ ನೇತೃತ್ವದ ನಿಯೋಗದಿಂದ ಕುಕ್ಕುಟೋದ್ಯಮ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು. ವಿದ್ಯುತ್ ದರ ಹೆಚ್ಚಳದಿಂದ ಕುಕ್ಕುಟೋದ್ಯಮಕ್ಕೆ ಹೊರೆಯಾಗಿದ್ದು, ಉತ್ಪಾದನಾ ವೆಚ್ಚ ಹೆಚ್ಚುತ್ತಿದೆ. ಅಷ್ಟೇ ಅಲ್ಲದೆ ಕೆಲವು ಕೋಳಿ ಘಟಕಗಳು ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.
ಡಾ. ಸುಶಾಂತ್ ರೈ ಅವರು ಸಂಘದ ಚಟುವಟಿಕೆಗಳು, ಅದರ ಅತ್ಯಾಧುನಿಕ ರೋಗ ನಿರ್ಣಯ ಪ್ರಯೋಗಾಲಯ ಮತ್ತು ತರಬೇತಿ ಕೇಂದ್ರ ಮತ್ತು ಕೋಳಿ ವಲಯವನ್ನು ಉತ್ತೇಜಿಸಲು ಸರಕಾರ ಮತ್ತು ಸದಸ್ಯರೊಂದಿಗೆ ಹೊಂದಿರುವ ಸಂಪರ್ಕದ ಬಗ್ಗೆ ತಿಳಿಸಿದರು.
ಕೆಪಿಎಫ್‍ಬಿಎ ಮಾಜಿ ಅಧ್ಯಕ್ಷ ಕೆ.ಎಸ್. ಅಶೋಕ್ ಕುಮಾರ್ ಅವರು ಕರ್ನಾಟಕದಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರವು ಬೆಳೆದಿರುವ ಹಾಗೂ ಇನ್ನೂ ಹೆಚ್ಚಿನ ಬೆಳವಣಿಗೆಗೆ ಬೇಕಾದ ಸಾಮಾರ್ಥ್ಯವಿದ್ದು ಅದಕ್ಕೆ ಸಚಿವಾಲಯದ ಬೆಂಬಲ ಕೋರಿದರು. ಕೋಳಿ ಸಾಕಾಣಿಕೆ ಕ್ಷೇತ್ರದಲ್ಲಿ ಕೆಪಿಎಫ್‍ಬಿಎ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿ, ಕೋಳಿ ಸಾಕಾಣೆದಾರರಿಗೆ ಪ್ರಯೋಜನವಾಗುವ ನಿರ್ಧಾರಕ್ಕೆ ಬೆಂಬಲಿಸುವುದಾಗಿ ಸಚಿವರು ತಿಳಿಸಿದರು. ಕೆಪಿಎಫ್‍ಬಿಎ ನಿಯೋಗ ಸಚಿವ ಕೆ.ವೆಂಕಟೇಶ್ ಅವರನ್ನು ಸನ್ಮಾನಿಸಿತು. ಈ ಸಂದರ್ಭ ಎಸ್.ಆರ್.ಆಗ್ರೋ ಫಾರ್ಮ್ಸ್‍ನ ರಾಜೇಶ್ ರೆಡ್ಡಿ ಮತ್ತು ಕೆಪಿಎಫ್‍ಬಿಎ ಕಾರ್ಯನಿರ್ವಾಹಕ ಕಾರ್ಯದರ್ಶಿ ಇನಾಯತ್ ಉಲ್ಲಾ ಖಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು