ಇತ್ತೀಚಿನ ಸುದ್ದಿ
ಮೂಡಿಗೆರೆ ಸಮೀಪದ ಕಾಫಿ ತೋಟದಲ್ಲಿ ಗುರುತು ಪತ್ತೆ ಹಚ್ಚದ ಕೊಳೆತ ಮೃತದೇಹ ಪತ್ತೆ
04/08/2023, 16:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲ್ಲೂಕಿನ ಲೋಕವಳ್ಳಿ ಕಾಫಿ ಎಸ್ಟೇಟ್ ನಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
ಅಡಿಕೆ ಸ್ಪ್ರೇಗೆಂದು ತೋಟಕ್ಕೆ ತೆರಳಿದವರಿಗೆ ಮೃತದೇಹ ಪತ್ತೆಯಾಗಿದೆ. ಮೃತದೇಹ ಅರ್ಧ ಕೊಳೆತ ಸ್ಥಿತಿಯಲ್ಲಿದೆ.
ಮೂಡಿಗೆರೆ ತಾಲ್ಲೂಕಿನ ಲೋಕವಳ್ಳಿ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹದ ಗುರುತು ಪತ್ತೆಯಾಗಿಲ್ಲ. ಮೃತ ದೇಹವನ್ನ ನೋಡಲು ಕಾಫಿತೋಟಕ್ಕೆ ಸ್ಥಳೀಯರು ದಂಡು ಆಗಮಿಸಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.