10:22 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೆಎಂಎಫ್  ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯಲ್ಲಿ ಮುದ್ರಿಸಿ: ಶಾಸಕ ವೇದವ್ಯಾಸ ಕಾಮತ್ ಪತ್ರ

23/07/2021, 17:57

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಂಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ಶಾಸಕ ವೇದವ್ಯಾಸ್ ಕಾಮತ್ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. 

ಈ ವಿಚಾರವಾಗಿ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳು

ಭಾಷೆಗೆ ಐತಿಹಾಸಿಕ ಹಿನ್ನೆಲೆಯಿದೆ. ಅನೇಕ ಶಾಸನಗಳಲ್ಲಿ ತುಲುಲಿಪಿ ಕಂಡು ಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು