8:53 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇವೀರಮ್ಮನ ಬೆಟ್ಟ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ: ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಇಲ್ಲ ಅವಕಾಶ

05/08/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಬಿಂಡಿಗ ದೇವೀರಮ್ಮನ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿ ಬಂದಿದೆ. ಭಕ್ತರಿಗೆ ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆ ನೀಡಿದೆ.
ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ.
ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಗೂ ನಿಷೇಧ ಹೇರಲಾಗಿದೆ.


ದೀಪಾವಳಿ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವೀರಮ್ಮನ ಬೆಟ್ಟ ಹತ್ತುತ್ತಾರೆ.
ಮದ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ.ಮಕ್ಕಳಿಂದ-ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುತ್ತಾರೆ. ಯುವಕ-ಯುವತಿಯರು ಬರ್ತಾರೆ, ಅವರಲ್ಲಿ ಪ್ರೇಮಿಗಳು ಇರ್ತಾರೆ. ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ನೀಡಿದೆ.
ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಅವಕಾಶವಿಲ್ಲ ಎಂಬ ಸೂಚನೆ ಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು