12:15 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ

07/08/2023, 14:47

ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ.
ಸಂಸತ್ತಿಗೆ ಆಗಮಿಸಿದ ರಾಹುಲ್ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ರಾಹುಲ್ ಪರ ಘೋಷಣೆಗಳನ್ನು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು