9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

08/08/2023, 19:38

ಮಂಗಳೂರು(reporterkarnataka.com): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಅವರು ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸಂಸ್ಥೆಯೆಲ್ಲ ವಿದ್ಯಾರ್ಥಿಗಳು ಮುಂದೆ ತಮ್ಮ ತಮ್ಮ ವಿಭಾಗದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಹೆಸರನ್ನು ತರಬೇಕೆಂದು ಕಿವಿಮಾತನ್ನು ಹೇಳಿದರು. ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫಾಝ್ ಹಾಸಿಮ್ ಜೆ. ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು.

ಈ ಕಾರ್ಯಕ್ರಮದಲ್ಲಿ ಫೀನಾ ಹಕೀಮ್ ಮತ್ತು ಕುಮಾರಿ ಹರ್ಷಿತ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ 3ನ್ನು ಬಿಡುಗಡೆಗೊಳಿಸಲಾಯಿತು.
ಪಿ.ಎ. ವಿದ್ಯಾಸಂಸ್ಥೆಯ ಎ.ಜಿ.ಎಂ. ಸರ್ಫುದ್ದೀನ್ ರವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ವಂದಿಸಿದರು. ಎಂಬಿಎ ವಿಭಾಗದ ನಿರ್ದೇಶಕ ಹಾಗೂ ಡೀನ್, (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್, ಪಿ.ಎ. ಟ್ರಸ್ಟ್ ನ ವಿವಿಧ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ, ಡಾ. ಸರ್ಫಾಝ್ ಹಾಸಿಮ್ ಜೆ, ಪ್ರೊ. ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ. ಸಜೀಸ್ ರಘುನಾಥನ್ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಕಾಲೇಜಿನ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾದ ಡಾ. ರೊನಾಲ್ಡ್ ವಾಲ್ಡರ್ ಹಾಗೂ ದೈಹಿಕ ಶಿಕ್ಷಣ ನಿರ್ಧೇಶಕರಾದ ಡಾ. ಇಕ್ಬಾಲ್ ಅವರು ಕಾರ್ಯಕ್ರಮವನ್ನು ಆಯೋಜಿಸಿದರು. ಬುಶೈರಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು