10:07 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ; 3 ಅಂಗಡಿಗಳ ಕಳ್ಳತನ ಬೆನ್ನಲ್ಲೇ ಹಾಡಹಗಲೇ ಮನೆಗಳ್ಳತನ; ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ

09/08/2023, 20:16

ಸಂತೋಷ್ ಅತ್ತಿಗೆರೆ‌ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಕಳ್ಳತನ ನಡೆದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ.
ಮೂರು ದಿನದ ಹಿಂದಷ್ಟೆ ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಬಣಕಲ್ ಮುಖ್ಯ ರಸ್ತೆಯಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಬೀಗ ಒಡೆದು ಲಕ್ಷಾಂತರ ರೂಪಾಯಿ ಹಣ ಹಾಗೂ ವಸ್ತುಗಳನ್ನ ಕಳ್ಳತನ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಕಳ್ಳತನ ಮಾಡಿದ್ದಾರೆ. 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಹಾಗೂ 25 ಸಾವಿರ ಹಣವನ್ನ ದೋಚಿದ್ದಾರೆ. ಮನೆಯೊಡತೆ ವೇದಾವತಿ ಇಂದು ಬೆಳಗ್ಗೆ ತಮ್ಮ ಕಾಫಿತೋಟಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆ ಮನೆಗೆ ಬರುವಷ್ಟರಲ್ಲಿ ಮನೆ ಹೆಂಚು ತೆಗೆದು ಕಳ್ಳತನ ಮಾಡಿದ್ದಾರೆ. ವಿಷಯ ತಿಳಿದು ಮೂಡಿಗೆರೆ ಸರ್ಕಲ್ ಇನ್ಸ್‍ಪೆಕ್ಟರ್, ಗೋಣಿಬೀಡು ಪಿ.ಎಸ್.ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಣಿಬೀಡು ಠಾಣೆಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆದರೆ, ಮೂಡಿಗೆರೆ ತಾಲೂಕಿನ ಅಕ್ಕಪಕ್ಕದ ಊರುಗಳಲ್ಲಿ ಹೀಗೆ ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದು ಹೊರಗಡೆಯವರು ಕಳ್ಳತನ ಮಾಡುತ್ತಿದ್ದಾರೋ ಅಥವ ಊರ ಒಳಗಿನವರೇ ಕಳ್ಳತನ ಮಾಡುತ್ತಿದ್ದಾರೋ ಅರ್ಥವಾಗದಂತಾಗಿದೆ. ಆದರೆ, ಮೂಡಿಗೆರೆ ಸುತ್ತಮುತ್ತಲಿನ ಜನ ಮಾತ್ರ ಆತಂಕದಿಂದ ಬದುಕುತ್ತಿದ್ದಾರೆ. ಮೂರು ದಿನಗಳ ಹಿಂದಷ್ಟೆ ಬಣಕಲ್ ಗ್ರಾಮದ ಮಹೇಶ್ ಸಂಭ್ರಮ್ ಎಂಬುವರ ಬಿಲ್ಡಿಂಗ್‍ನಲ್ಲಿನ ಮೊಬೈಲ್ ಅಂಗಡಿ, ಬಟ್ಟೆ ಅಂಗಡಿ ಹಾಗೂ ದಿನಸಿ ಅಂಗಡಿಯಲ್ಲಿ ಕಳ್ಳತನ ನಡೆದಿತ್ತು. ಅಂಗಡಿಗಳ ಹಿಂದಿನ ಶೀಟ್ ಒಡೆದು, ಶೆಟ್ಟರ್ ಮುರಿದು ಸರಣಿ ಕಳ್ಳತನ ಮಾಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದರು. ಶ್ವಾನದಳವನ್ನ ತಂದು ಕಳ್ಳರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಇದೀಗ, ಮತ್ತೆ ಹಾಡಹಗಲೇ ಕಳ್ಳತನ ನಡೆದಿದ್ದು ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು