ಇತ್ತೀಚಿನ ಸುದ್ದಿ
ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ
11/08/2023, 17:11
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಮುನ್ನೆಲೆಗೆ ಬಂದಿದ್ದು, ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಹೊರಡಿಸಿದೆ.
ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕುಳಿತಿರುವ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ
ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ. ಐಡಿಎಸ್ ಜಿ ಕಾಲೇಜು ಅಡಳಿತ ಮಂಡಳಿ ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿದೆ.
ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಕ್ಕೆ ನಿಷೇಧ ಹೇರಲಾಗಿಧ. ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ನಿನ್ನೆ ಮೊದಲ ವರ್ಷದ ವಿದ್ಯಾರ್ಥಿನಿ ಹಿಜಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಶಿಕ್ಷಕರ ಸೂಚನೆ ಮೇರೆಗೆ ವಿದ್ಯಾರ್ಥಿ ನಿ ಹಿಜಾಬ್ ತೆಗೆದಿದ್ದಾರೆ.