10:40 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು