9:04 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ

13/08/2023, 23:02

ಮಂಗಳೂರು(reporterkarnataka.com): ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಮೂಡುಶೆಡ್ಡೆ ನಿವಾಸಿ ಇಮ್ರಾನ್ ಅಲಿಯಾಸ್ ಮೂಡುಶೆಡ್ಡೆ ಇಮ್ರಾನ್(36), ಮಣಿಪಾಲದ ಅಮ್ಜತ್ ಖಾನ್(42) ಹಾಗೂ ಮಂಜನಾಡಿ ಅಬ್ದುಲ್ ಬಶೀರ್ ಅಬ್ಬಾಸ್(39) ಎಂದು ಗುರುತಿಸಲಾಗಿದೆ. ಮೂಡುಶೆಡ್ಡೆಯ ನಿವಾಸಿ ಮೊಹಮ್ಮದ್ ಇಮ್ರಾನ್ ಎಂಬಾತನು ಇನ್ನಿಬ್ಬರು ವ್ಯಕ್ತಿಗಳೊಂದಿಗೆ ಸೇರಿಕೊಂಡು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ಕಾರಿನಲ್ಲಿ ಸಾಗಾಟ ಮಾಡಿಕೊಂಡು ಬೊಂದೆಲ್ ಪಡುಶೆಡ್ಡೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ
ಒಟ್ಟು 170 ಗ್ರಾಂ ತೂಕದ ರೂ. 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5, ಮಾರುತಿ ರಿಡ್ಜ್ ಕಾರು-1, 6 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 14,76,500/-ಆಗಬಹುದು. ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಇಮ್ರಾನ್ ಅಲಿಯಾಸ್ ಮೂಡುಶೆಡ್ಡೆ ಇಮ್ರಾನ್ ಎಂಬಾತನ ವಿರುದ್ಧ ಈ ಹಿಂದೆ 2016ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಮಂಜೂರು ಚರಣ್ ಎಂಬಾತನ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2017 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, 2019 ನೇ ಇಸವಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2020 ನೇ ಇಸವಿಯಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಾನಿಗೊಳಿಸಿದ ಪ್ರಕರಣ, 2022 ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಯ 1 ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, 2023 ನೇ ಇಸವಿಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ. ಈತನು ಇತ್ತೀಚೆಗೆ ಒಂದು ವಾರದ ಹಿಂದೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.
ಇನ್ನೋರ್ವ ಆರೋಪಿ ಅಬ್ದುಲ್ ಬಶೀರ್ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ .ಎಂ., ಪಿಎಸ್ಐ ಯವರಾದ ನರೇಂದ್ರ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು