2:41 PM Saturday18 - January 2025
ಬ್ರೇಕಿಂಗ್ ನ್ಯೂಸ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ…

ಇತ್ತೀಚಿನ ಸುದ್ದಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾಭಿನಂದನೆ

15/08/2023, 18:51

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಅಭಿನಂದಿಸಿ ಗೌರವಿಸಿದರು.


ಮಂಗಳೂರಿನಲ್ಲಿ ಕಿತ್ತಳೆ ಮಾರಿ ಬದುಕು ಕಟ್ಟಿಕೊಂಡಿದ್ದ ಹಾಜಬ್ಬ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟುವ ಕನಸು ಕಂಡಿದ್ದರು. ಅಕ್ಷರಾಭ್ಯಾಸವಿಲ್ಲದ ಹಾಜಬ್ಬ ಅವರು ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು ಎನ್ನುವ ಒಂದೇ ಕಾರಣಕ್ಕೆ ಛಲ ಬಿಡದೆ ಅಂದಿನ ಶಾಸಕರ ಬೆನ್ನು ಹಿಡಿದು ತನ್ನ ಊರಿಗೆ ಶಾಲೆ ಮಂಜೂರು ಮಾಡಿಸಿದ್ದರು. ಇದೀಗ ಆ ಶಾಲೆ ಬಹು ಎತ್ತರಕ್ಕೆ ಬೆಳೆದು ಕಾಲೇಜು ಆಗಿ ಮಾರ್ಪಟ್ಟಿದೆ. ಹಾಜಬ್ಬ ಅವರಿಗೆ ದೇಶದ ಪ್ರತಿಷ್ಢಿತ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿ ಕೂಡ ಒಲಿದು ಬಂದಿದೆ. ಹಾಜಬ್ಬ ಅವರ ಸಾಧನೆಯನ್ನು ಮನಗಂಡ ರಾಜ್ಯದ ನೂತನ ಸರಕಾರದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು ಆದರದಿಂದ ಗೌರವಿಸಿ ಸನ್ಮಾನಿಸಿದರು. ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು