4:10 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಎರಡು ಪ್ರತ್ಯೇಕ ಪ್ರಕರಣದಲ್ಲಿ 4 ಮಂದಿ ಬಂಧನ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

15/08/2023, 21:45

ಮಂಗಳೂರು(reporterkarnataka.com): ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.



ನಗರದ ಉತ್ತರ ಠಾಣೆ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮೂವರು ವ್ಯಕ್ತಿಗಳು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಉದ್ಯಾವರದ
ಮೊಹಮ್ಮದ್ ಹನೀಫ್ ಎ.ಎನ್.(47),ಸೈಯದ್ ಸೈಯದ್ ಫೌಜಾನ್(30) ಹಾಗೂ ಕಣ್ವತೀರ್ಥದ ಸಿರಾಜುದ್ದೀನ್ ಅಬ್ಬೂಬಕ್ಕರ್(35) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 100 ಗ್ರಾಂ ತೂಕದ ರೂ. 5 ಲಕ್ಷ ರೂ.
ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು 4 ಸಾವಿರ, ಮಾರುತಿ ಸ್ವಿಫ್ಟ್ ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎಯನ್ನು
ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೀಯಪದವಿನ
ಇಬ್ರಾಹಿಂ ಅರ್ಷಾದ್ ವಿ.ಕೆ.(30)ಎಂಬಾತನನ್ನು ವಶಕ್ಕೆ ಪಡೆದುಕೊಂಡು ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500/-ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಇಬ್ರಾಹೀಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಸಿಸಿಬಿ ಕಾರ್ಯಾಚರಣೆಯಲ್ಲಿ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು