9:45 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಆ.19ರಂದು ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

16/08/2023, 22:20

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಉಡುಪಿ ನಾಯರ್‌ಕೆರೆಯ ಐಎಂಎ ಭವನದಲ್ಲಿ ಆ.19ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಈ ವಿಷಯ ತಿಳಿಸಿದರು.
ಕಾರ್ಯಾಗಾರವನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಉದ್ಘಾಟಿಸಲಿರುವರು. ಛಾಯಾಚಿತ್ರ ಪ್ರದರ್ಶನವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು, ಹಳೆ ಕ್ಯಾಮೆರಾಗಳ ಪ್ರದರ್ಶನವನ್ನು ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ ಉದ್ಘಾಟಿಸಲಿರುವರು ಎಂದರು.
ಫೋಟೋಗ್ರಫಿ ಕಾರ್ಯಾಗಾರವನ್ನು ಉದಯವಾಣಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ನುಡಿಚಿತ್ರ ಕಾರ್ಯಾಗಾರವನ್ನು ಮಂಗಳೂರು ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಸುಶೀಲೇಂದ್ರ ಕುಟುಪಾಡಿ ನಡೆಸಿಕೊಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು.
ಈ ಕಾರ್ಯಾಗಾರದಲ್ಲಿ ಉಡುಪಿ ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಕಾರ್ಕಳ ಎಂಪಿಎಂ ಕಾಲೇಜು ಮತ್ತು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿರುವರು.
ಛಾಯಾಚಿತ್ರ ಪ್ರದರ್ಶನದಲ್ಲಿ ನಮ್ಮ ಸಂಘದ ಸದಸ್ಯರು ತೆಗೆದ 20ಕ್ಕೂ ಅಧಿಕ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಅಲ್ಲದೆ ಸಂಘದ ಸದಸ್ಯರ ಸಂಗ್ರಹದಲ್ಲಿರುವ ಹಳೆಯ ವಿಡಿಯೋ ಹಾಗೂ ಫೋಟೋ ಕ್ಯಾಮೆರಾಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಅವರು ಮಾಹಿತಿ‌ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು