6:11 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ: ಪರಿಹಾರ ನೀಡದೆ ವಂಚನೆ; 22ರಿಂದ 20 ಗ್ರಾಮದ ಸಂತ್ರಸ್ತರಿಂದ ಧರಣಿ

18/08/2023, 21:02

ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೇ 25 ರಷ್ಟು ಕೂಡ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ರಸ್ತೆ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ. ಇದರ ವಿರುದ್ಧ ಇದೇ 22ರಿಂದ 29 ರವರಿಗೆ ಎನ್ಎಚ್ಎಐ ಯೋಜನಾ ಕಚೇರಿ ಎದುರು 20 ಗ್ರಾಮಗಳ ಸಂತ್ರಸ್ತರು ಧರಣಿ ನಡೆಸುತ್ತೇವೆ ಎಂದು ಭೂ ಮಾಲೀಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳದ ಸಾಣೂರಿನಿಂದ ಮಂಗಳೂರಿನ ನಂತೂರು ವೃತ್ತದವರೆಗೆ ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬೀಳುತ್ತಿದೆ ಎಂದರು.
ನಂತೂರಿನ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ
ಕಳೆದ ಮಾರ್ಚ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಆದರೆ ಈಗ 4 ತಿಂಗಳಾದರೂ ಯಾವುದೇ ಸುದ್ದಿಯೇ ಇಲ್ಲ. ಒಂದು ತಿಂಗಳಲ್ಲಿ ಪರಿಹಾರ ತೆಗೆಸಿಕೊಡುತ್ತೇನೆ ಎಂದು ಹೇಳಿದ ಅಧಿಕಾರಿ ಕೂಡ ನಾಪತ್ತೆ ಆದರು. 5 ತಿಂಗಳು ಕಳೆದರೂ ಭೂಸ್ವಾಧೀನಕ್ಕೆ ಪರಿಹಾರ ನೀಡುವ ಬಗ್ಗೆ ಪ್ರಕ್ರಿಯೆ ಆಗಿಲ್ಲ. ಹೈಕೋರ್ಟ್ ನಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆದೇಶ ನೀಡಿದರೂ ಅಧಿಕಾರಿಗಳು ಪತ್ರವ್ಯವಹಾರ ಮಾಡುವುದರಲ್ಲಿಯೇ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
2020ರ ಮಾರುಕಟ್ಟೆ ದರದ ಪ್ರಕಾರ, ಭೂಮಿಗೆ ಪರಿಹಾರ ನೀಡಲು ಆದೇಶ ನೀಡಲಾಗಿತ್ತು. ಈಗ ಮೂರು ವರ್ಷ ಕಳೆದಿದ್ದು, ಭೂಮಿಗೆ ಬೆಲೆ ಜಾಸ್ತಿ ಆಗಿದೆ. ಸೂಕ್ತ ಪರಿಹಾರಕ್ಕಾಗಿ ನಾವು ಮತ್ತೆ ಧರಣಿ ನಡೆಸುವುದು ಅನಿವಾರ್ಯ ಆಗಿದೆ. ಬೆಳಿಗ್ಗೆಯಿಂದ ಸಂಜೆಯ ವರೆಗೆ ದಿನವೂ ಧರಣಿ ನಡೆಸಲಿದ್ದೇವೆ ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಅವರ ಹೆಸರಿನಲ್ಲಿ ಬಿಜೆಪಿ ಮಾಹಿತಿ ವಿಭಾಗವು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಪದವು ಗ್ರಾಮದ ಎರಡೂವರೆ ಎಕರೆ ಜಾಗದ ಸ್ವಾಧೀನಕ್ಕೆ 200 ಕೋಟಿ ಬಿಡುಗಡೆ ಆಗಿದೆ ಎಂದು ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದಾರೆ. ದಾಖಲೆ ಕೇಳಿದರೆ ಅವರಿಂದ ಯಾವುದೇ ಉತ್ತರ ಇಲ್ಲ. ಸುಳ್ಳು ಹೇಳಿ ಜನರನ್ನು ಮೋಸ ಮಾಡುವುದುನ್ನು ನಿಲ್ಲಿಸಬೇಕು. ಕಳೆದ ನಾಲ್ಕು ವರ್ಷಗಳಲ್ಲಿ 12 ಮಂದಿ ವಿಶೇಷ ಭೂಸ್ವಾಧೀನ ಅಧಿಕಾರಿ ಬದಲಾಗಿದ್ದಾರೆ. ಒಬ್ಬ ಅಧಿಕಾರಿ ಬಂದು ತಿಂಗಳು ಕಳೆಯುವಾಗ ಮತ್ತೊಬ್ಬ ಬರುತ್ತಾರೆ ಎಂದು ಸಂತ್ರಸ್ತ ಹೋರಾಟಗಾರ ರತ್ನಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ವಿಶ್ವಜಿತ್, ಪ್ರಕಾಶ್ಚಂದ್ರ, ಜಯರಾಂ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು