11:59 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ

24/07/2021, 15:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. 

ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ್ಬಿನ ಗದ್ದೆಗಳಿಗೆ ನುಗ್ಗಿದ ನೀರು ಅನೇಕ ಗ್ರಾಮಗಳಲ್ಲಿ ಪ್ರವಾಹದ ಭೀತಿ ಉಂಟು ಮಾಡಿದೆ.


ಪ್ರವಾಹ ಮುನ್ಸೂಚನೆ ನೀಡಿದ ಜಿಲ್ಲಾಡಳಿತ ಕುರಿತು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.

ಇದೇ ವೇಳೆ ಕರ್ನಾಟಕ ರೈತ ಸಂಘ ಹಾಗೂ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷ ಮಾದೇವ್ ಮಡಿವಾಳ ಮಾತನಾಡಿ, ಕೊಯ್ನಾ ಜಲಾಶಯದಿಂದ ನೀರು ಹೊರ ಬಿಡುತ್ತೇವೆ ಎಂದು ಮಹಾರಾಷ್ಟ್ರ ಸರಕಾರ ಜಿಲ್ಲಾಡಳಿತಕ್ಕೆ ತಿಳಿಸಿದ್ದರೂ ಜಿಲ್ಲಾಡಳಿತ ಜನರಿಗೆ ಈ ಕುರಿತು ಮಾಹಿತಿ ನೀಡಿಲ್ಲ. ರೈತರ 500ಕ್ಕೂ ಹೆಚ್ಚು ಪಂಪ್ಸೆಟ್ ಗಳು ನೀರಿನಲ್ಲಿ ಮುಳುಗಿದ್ದು ಇದರಿಂದ ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೇ  ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಜನರ ಸೇವೆಗೆ ಮುಂದಾಗಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು