1:10 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಉರ್ವಾಸ್ಟೋರ್ ಮೈದಾನ ಬಳಿ ಮಟ್ಕಾ ದಂಧೆ: ಇಬ್ಬರ ಬಂಧನ; 4.24 ಲಕ್ಷ ರೂ. ನಗದು, ಸೊತ್ತು ವಶ

19/08/2023, 17:32

ಮಂಗಳೂರು(reporterkarnataka.com): ನಗರದ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿಲಿಂಬಿಯ ಗೋಕುಲದಾಸ್ ಶೆಣೈ(55) ಹಾಗೂ ಕೋಡಿಕಲ್ ನ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ವಶದಲ್ಲಿದ್ದ ಮಟ್ಕಾ ಚೀಟಿ ಗೆ ಸಂಬಂಧಿಸಿದ 424490 ರೂ.ನಗದು, ಮೊಬೈಲ್‌ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಉರ್ವಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್‌ ಅವರ ಆದೇಶದಂತೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಯವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಪಿಐ ಭಾರತಿ ಅವರ ತಂಡ ಹರೀಶ್ ಹೆಚ್.ಎ., ಸಫೀನಾ, ವೆಂಕಟೇಶ್, ರಾಮಚಂದ್ರ, ಸುನೀತ, ಭರಣಿ ದೀಕ್ಷಿತ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು