8:26 AM Sunday22 - December 2024
ಬ್ರೇಕಿಂಗ್ ನ್ಯೂಸ್
ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರು ಅವಧಿ ಮುಗಿದ ಔಷಧದಂತೆ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಟೀಕೆ

19/08/2023, 20:43

ಮಂಗಳೂರು(reporterkarnataka.com):ಬಿಜೆಪಿ ರಾಜ್ಯದಲ್ಲಿ ಚೇತರಿಕೆ ಆಗದಿರುವಷ್ಟು ಅಧ:ಪತನದ ಹಾದಿ ಹಿಡಿದಿದೆ. ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷರು ಅವಧಿ ಮುಗಿದ ಔಷಧ ರೀತಿಯಲ್ಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ವ್ಯಂಗ್ಯವಾಡಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಂತರಿಕ ಗುಂಪುಗಾರಿಕೆಯಿಂದ ಬಳಲುತ್ತಿದೆ. ಇವತ್ತಿನವರಿಗೆ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ನಾಯಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ತಮ್ಮ ಸೋಲಿಗೆ ಬಿಜೆಪಿಯವರೇ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರೂ ಆತ್ಮಾವಲೋಕನ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡು ಈಗ ಅವಧಿ ಮೀರಿದ ಔಷಧೀಯ ರೀತಿಯಲ್ಲಿ ನಳಿನ್ ಕುಮಾರ್ ಕಟೀಲ್ ಬಿಜೆಪಿಯಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶರಣಾಗಿದ್ದಾರೆ ಎಂದು ಐವನ್ ಹೇಳಿದರು.
ಬಿಜೆಪಿ ಸರಕಾರದ ಅವಧಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ವ್ಯಾಪಕ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ. ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.
ವೆನ್ಲಾಕ್ ಆಸ್ಪತ್ರೆ ಸಮಸ್ಯೆ ಗಳ ಬಗ್ಗೆ ಟೀಕೆ ಮಾಡುವ ಸ್ಥಳೀಯ ಶಾಸಕರು ತಮ್ಮ ಹೊಣೆಗಾರಿಕೆ ಮರೆತು ಮಾತನಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸಗಳ ಅರ್ಧ ಭಾಗವನ್ನು ಕೂಡ ನಮ್ಮ ಸಂಸದರು ಮಾಡಿಲ್ಲ. ಮಂಗಳೂರಿಗೆ ಮೆಟ್ರೋ ತರಬಹುದಿತ್ತು. ಅದು ಕೂಡ ಸಾಧ್ಯ ಆಗಿಲ್ಲ. ಪಂಪ್ ವೆಲ್ ಸೇತುವೆ ಕೂಡ ಅಸಮರ್ಪಕವಾಗಿದೆ ಎಂದರು ಟೀಕಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯ ಪ್ರವೀಣ್ ಚಂದ್ರ
ಆಳ್ವ, ಮಾಜಿ ಸದಸ್ಯರಾದ ಸೇಸಮ್ಮ, ಭಾಸ್ಕರ ರಾವ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಅಬ್ದುಲ್ ಸಲೀಂ ಮುಕ್ಕ, ಚೇತನ್ ಕುಮಾರ್, ಹಬೀಬ್ ಕಣ್ಣೂರ್, ಸತೀಶ್ ಪೆಂಗಲ್, ಯೋಗೀಶ್ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು