2:11 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ

19/08/2023, 22:27

ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್‌ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್‌ ಸಿಲಿಂಡರ್‌ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ದಾಳಿ ಮಾಡಲಾಯಿತು.


ಈ ಸಂದರ್ಭದಲ್ಲಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್.ಪಿ ಗ್ಯಾಸ್ ಸಿಲಿಂಡರ್ ಗಳು ಸೇರಿದಂತೆ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್ ಗಳನ್ನು ಪತ್ತೆ ಹಚ್ಚಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳಕೆಯ ಶೇಖ್ ಆಶಪ್‌ ಉದ್ದೀನ್ (59) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು