1:21 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿಯ ಬಂಧನ

20/08/2023, 20:55

ಮಂಗಳೂರು(reporterkarnataka.com): ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಆರೋಪದ ಮೇಲೆ ನಗರದ ಪ್ರತಿಷ್ಟಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಥಮ ವರ್ಷದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬೆನೆಡಿಕ್ಟ್ ಸಾಬೂ (25) ಎಂಬಾತ ಬಂಧಿತ ಯುವಕ. ಈತ ತಾನು ಪೊಲೀಸ್ ಅಧಿಕಾರಿಯೆಂದು ಬಿಂಬಿಸಿ ವಂಚಿಸಲು ಪ್ರಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ RAW – KERALA STATE POLICE ಮತ್ತು AGRICULTURE DEPARTMENT AND FARMERS WELFARE DEPARTMENT KERALA 60 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ PSI ಪೊಲೀಸ್ ಸಮವಸ್ತ್ರ, ಪೊಲೀಸ್ ಶೂನ್, ಲೊಗೋ, ಮೆಡಲ್, ಬೆಲ್ಸ್ , ಕ್ಯಾಪ್ , 1 ಲ್ಯಾಪ್ ಟಾಪ್ ಮತ್ತು 2 ಮೊಬೈಲ್ ನಟ್ ಗಳನ್ನು ವಶಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಹಿನ್ನಲೆಯಲ್ಲಿ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲ್ದೀಪ್ ಜೈನ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್‌ ಉಪ-ಆಯುಕ್ತರಾದ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸೆಂಟ್ರಲ್ ಉಪ-ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಮಹೇಶ್ ಕುಮಾರ್ ಅವರ ಸೂಚನೆಯಂತೆ ಉರ್ವ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು