11:38 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧವಾಗಿ ಪುನರಾಯ್ಕೆ: 2028 ವರೆಗೆ ಮತ್ತೆ ಸಾರಥ್ಯ

21/08/2023, 20:17

ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೊ – ಅಪರೇಟಿವ್ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆಗೊಂಡಿದೆ. 2028 ವರೆಗೆ ಮತ್ತೆ ಸಾರಥ್ಯ ವಹಿಸಲಿದೆ.
ಆಗಸ್ಟ್ 13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಎಂಸಿಸಿ ಚುನಾವಣಾ ಪ್ರಕ್ರಿಯೆಗೆ ಆಕಾಂಕ್ಷೆವುಳ್ಳ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಗಸ್ಟ್ 20 ರಂದು ನಾಮಪತ್ರ ಪರಿಶೀಲನೆಯಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲಾ 14 ಅರ್ಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ಕ್ರಮಬದ್ದವಾಗಿರುವುದರಿಂದ, ರಿಟರ್ನಿಂಗ್ ಅಧಿಕಾರಿ ಸುಧೀರ್ ಕುಮಾರ್ ಜೆ. ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳನ್ನು ಚುನಾಯಿತರೆಂದು ಫೋಷಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಇದರ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, ಆಗಸ್ಟ್ 27 ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಎಂದು ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ತಿಳಿಸಿದ್ದಾರೆ.

ಈ ಮೂಲಕ 111 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಸಹಕಾರಿ ರಂಗದ ಮುಂಚೂಣಿಯ ಎಂಸಿಸಿ ಬ್ಯಾಂಕಿನ ಚುಕ್ಕಾಣಿ, ಮುಂದಿನ 5 ವರ್ಷಗಳ ಅವಧಿಗೆ, ಹಾಲಿ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ತಂಡದ ಪಾಲಾಗಿದೆ. 111 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ಯಾಂಕಿನ ನಿರ್ದೇಶಕ ಮಂಡಳಿಯ ಆಯ್ಕೆ ಅವಿರೋಧವಾಗಿ ನಡೆದಿದ್ದು, ವೆಲೆನ್ಸಿಯಾ ನಿವಾಸಿ ಅನಿಲ್ ಲೋಬೊ ನೇತೃತ್ವದ ತಂಡದಲ್ಲಿ ಜೆರಾಲ್ಡ್ ಪಿಂಟೋ, ಕಲ್ಯಾಣ್‌ಪುರ, ರೋಶನ್ ಡಿ’ಸೋಜ, ಮುಡಿಪು , ಹೆರಾಲ್ಡ್ ಜೋನ್ ಮೊಂತೆರೊ, ಕೆಲರಾಯ್, ಜೋಸೆಫ್ ಎಂ.ಅನಿಲ್ ಪತ್ರಾವೊ, ದೆರೆಬೈಲ್, ಡೇವಿಡ್ ಡಿ’ಸೋಜ, ಬಜಪೆ, ಮೆಲ್ವಿನ್ ಅಕ್ವಿನಸ್ ವಾಸ್, ಮಂಗಳೂರು, ಜೆ.ಪಿ.ರೋಡ್ರಿಗಸ್, ಪುತ್ತೂರು, ಆಂಡ್ರು ಡಿ’ಸೋಜ, ಮೂಡಬಿದ್ರಿ, ಎಲ್‌ರೊ ಕಿರಣ್ ಕ್ರಾಸ್ಟೊ, ಗಂಗೊಳ್ಳಿ, ಜೆರಾಲ್ಡ್ ಜೂಡ್ ಡಿ’ಸಿಲ್ವ, ಕಾರ್ಕಳ, ವಿನ್ಸೆಂಟ್ ಅನಿಲ್ ಲಸ್ರಾದೊ, ಬಂಟ್ವಾಳ, ಐರಿನ್ ರೆಬೆಲ್ಲೊ, ಕುಲಶೇಖರ ಮತ್ತು ಫ್ರೀಡಾ ಫ್ಲಾವಿಯಾ ಡಿ’ಸೋಜ, ಬಳ್ಕುಂಜೆ ಇದ್ದಾರೆ.
ಹಾಲಿ ಬ್ಯಾಂಕಿನ ಆಡಳಿತ ಮಂಡಳಿಯ ಅವಧಿಯು ಅಗೋಸ್ತ್ 26ರಂದು ಕೊನೆಗೊಳ್ಳಲಿದ್ದು, ನಂತರ ನೂತನ ಆಡಳಿತ ಮಂಡಳಿ ಘಟನೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು