4:32 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ನಾಗಾ ಸಾನಿಧ್ಯದ ಸ್ವಂತ ಜಮೀನನ್ನು ದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್: ದಳವಾಯಿ ಕುಟುಂಬ ಫುಲ್ ಖುಷ್

22/08/2023, 16:26

ಮಂಗಳೂರು(reporterkarnataka.com): ಅಲ್ಲಿ ಇಲ್ಲಿ ನಾವು ಭೂದಾನ ಮಾಡಿದ ವಿಷಯ ಆಗಾಗ ಕೇಳುತ್ತಲೇ ಇರುತ್ತೇವೆ. ಈಗ ವಿಧಾನಸಭೆ ಸ್ಪೀಕರ್ ಅವರೇ ತನ್ನ ಜಮೀನಲ್ಲಿರುವ ನಾಗ ಸಾನಿಧ್ಯವನ್ನು ಉಚಿತವಾಗಿ ಅದರ ವಾರೀಸುದಾರರಿಗೆ ಬಿಟ್ಟು ಕೊಟ್ಟು ಸೌಹಾರ್ದತೆಯನ್ನು ಮತ್ತೊಮ್ಮೆ ಮೆರೆದಿದ್ದಾರೆ.
ಸ್ಪೀಕರ್ ಖಾದರ್ ಅವರ ಉದಾರ ಮನೋಭಾವದಿಂದ ದಳವಾಯಿ ಕುಟುಂಬ ಫುಲ್ ಖುಷಿಯಾಗಿದೆ. ಜತೆಗೆ ಖಾದರ್ ಅವರಿಗೂ ದೈವ ಕಾರ್ಯಕ್ಕೆ ಭೂದಾನ ಮಾಡಿದ ಸಂತೃಪ್ತಿ ತುಂಬಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ ಜಮೀನಿನಲ್ಲಿರುವ ನಾಗನ ಸಾನಿಧ್ಯದ ಜಾಗವನ್ನು ಅದರ ವಾರಸುದಾರರಿಗೆ ನೀಡಿದ್ದಾರೆ.
ಹಿರಿಯರ ಕಾಲದಲ್ಲಿ ಖಾದರ್ ಅವರ ಜಮೀನು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು. ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು. ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದಿದ್ದಾರೆ. ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜ್ರಂಬಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ಈ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು