1:34 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ…

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಜೋಕೆ: ಪಾಲಿಕೆಯಿಂದ ದಂಡ ವಸೂಲು

24/08/2023, 13:49

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟುಮಾಡುತ್ತಿದ್ದು, ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಆದ್ದರಿಂದ ನಗರದ ಮಣ್ಣಗುಡ್ಡ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ರಾಶಿ ಹಾಕಿರುವವರ ಮೇಲೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂ.ಗಳ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಲಾಗಿದೆ.
ಇನ್ನು ಮುಂದೆ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು