6:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ: ರೈತ ಸಂಘದಿಂದ ಹೆಸ್ಕಾಂಗೆ ಕಚೇರಿ ಎದುರು ಭಾರೀ ಪ್ರತಿಭಟನೆ, ಮುತ್ತಿಗೆ

24/08/2023, 13:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸ್ಥಗಿತ ಖಂಡಿಸಿ ಅಥಣಿ ಹೆಸ್ಕಾಂ ಕಚೇರಿ ಎದುರು ರೈತ ಮುಖಂಡ ಮಹಾದೇವ ಮಡಿವಾಳ ನೇತ್ರತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಿದರು.


ಅಥಣಿ ತಾಲೂಕಿನ ಗ್ರಾಮಗಳಿಗೆ ಪ್ರತಿದಿನ ಕೇವಲ ಎರಡು ಘಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದ್ದು ಮಳೆಯಾಗದೆ ರೈತ ಕಂಗಾಲಾಗುತ್ತಿರುವ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳು ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ರೈತ ಮುಖಂಡ ಮಹಾದೇವ ಮಡಿವಾಳ ಆಕ್ರೋಶ ವ್ಯಕ್ತಪಡಿಸಿದರು. ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಇನ್ನೂ ಮನವಿ ಸ್ವೀಕರಿಸಿದ ಬಳಿಕ ಹೆಸ್ಕಾಂ ಅಧಿಕಾರಿ ಸಿ. ಬಿ. ಯಕಂಚ್ಚಿ ಮಾತನಾಡಿ, ಎರಡು ದಿನಗಳಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು