5:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಅಕ್ರಮ ಮರಳುಗಾರಿಕೆ ಅಡ್ಡೆ: 2 ಪ್ರತ್ಯೇಕ ಸ್ಥಳಗಳಿಗೆ ಪೊಲೀಸ್ ದಾಳಿ; 12 ಲೋಡ್ ಮರಳು, ಪಿಕ್ ಅಪ್ ವಾಹನ ವಶ

24/08/2023, 14:40

ಮಂಗಳೂರು(reporterkarnataka.com): ಅಕ್ರಮ ಮರುಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 12 ಲೋಡ್ ಮರಳು ಹಾಗೂ ಪಿಕ್ ಅಪ್ ವಾಹನ ವಶಪಡಿಸಿಕೊಂಡಿದ್ದಾರೆ.


ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮತ್ತು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಆ. 24ರಂದು ಬೆಳಗ್ಗಿನ ಜಾವ 4-10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪೆರ್ಮನ್ನೂರು ಗ್ರಾಮದ ಕಲ್ಲಾಪು ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟದ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಎಲ್-29-482 ನೇ ಪಿಕ್ ಅಪ್ ವಾಹನ ಹಾಗೂ ಉಳ್ಳಾಲ ಗ್ರಾಮದ ಕೋಟೆಪುರ ಎಂಬಲ್ಲಿ ನೇತ್ರಾವತಿ ದಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಸುಮಾರು 12 ಲೋಡ್ ಸಾಮಾನ್ಯ ಮರಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು