ಇತ್ತೀಚಿನ ಸುದ್ದಿ
ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿ: ಕೇಂದ್ರ ಸಚಿವ ಭಗವಂತ ಖೂಬಾ ಪರಿಶೀಲನೆ
25/08/2023, 20:23

ಮಂಗಳೂರು(reporterkarnataka.com): ನಗರದ ಹೊರವಲಯದ ಗಂಜಿಮಠ ಬಳಿಯ
ಪ್ಲಾಸ್ಟಿಕ್ ಪಾಕ್೯ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಯನ್ನು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರು ಶುಕ್ರವಾರ ಪರಿಶೀಲನೆ ನಡೆಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್, ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.