2:27 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ

24/07/2021, 18:48

ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 

ಮಂಜುನಾಥ ಸ್ವಾಮಿಯ ಪ್ರಸಾದ ಹಚ್ಚಿ ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಆಸ್ಪತ್ರೆಯಿಂದ ಹೊರ ಬಂದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಡಾ. ಹೆಗ್ಗಡೆ ಅವರು, ಮಂಜುನಾಥ ಸ್ವಾಮಿಯ ಪ್ರಸಾದ ಹಚ್ಚಿದ ಕುರಿತು ಮಾಹಿತಿ ನೀಡಿದರು.

ರಾಷ್ಟ ರಾಜಕಾರಣವನ್ನು ಪ್ರವೇಶಿಸಿದ ಆಸ್ಕರ್ ಫೆರ್ನಾಂಡಿಸ್ ಅವರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ನಿಕಟವರ್ತಿಯಾಗಿದ್ದರು. ಅವರು ರಾಜ್ಯಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಅವರ ಆರೋಗ್ಯಕ್ಕಾಗಿ ಪಕ್ಷಾತೀತವಾಗಿ ಈ ರಾಜ್ಯದ ಅದರಲ್ಲೂ ವಿಶೇಷವಾಗಿ ತುಳುನಾಡಿನ ಜನತೆ ಪ್ರಾರ್ಥನೆ ಸಲ್ಲಿಸಬೇಕೆಂದು ಅವರು ನುಡಿದರು.

ಆಸ್ಕರ್ ಅವರ ಮೆದುಳು ಈಗಲೂ ಕ್ರಿಯಾಶೀಲವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ. ಆಸ್ಕರ್ ಅವರು ಶೀಘ್ರ ಗುಣಮುಖರಾಗಕೆಂದು ನಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಡಾ. ಹೆಗ್ಗಡೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು