6:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಯೂರಿಯಾ ಉತ್ಫಾದನೆಯಲ್ಲಿ ದೇಶ ಸ್ವಾವಲಂಬನೆ: ಕೇಂದ್ರ ಸಚಿವ ಭಗವಂತ ಖೂಬ

25/08/2023, 20:35

ಮಂಗಳೂರು(reporterkarnataka.com):- ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು.
ಅವರು ಶುಕ್ರವಾರ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ವರ್ಷ 6ನೇ ಘಟಕ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಪ್ರತಿ ವರ್ಷ 12.7 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡುವ ಮೂಲಕ ದೇಶದ ಅಗತ್ಯದ ಯೂರಿಯಾ ಉತ್ಪಾದನೆಯ ಗುರಿ ಸಾಧನೆಯೊಂದಿಗೆ ಸ್ವಾವಲಂಬನೆ ಸಾಧ್ಯವಾಗಲಿದೆ. ಮುಂದಿನ ವರ್ಷ ಬೇಡಿಕೆ ಇರುವ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ರೈತರಿಗೆ ಒದಗಿಸಲಾಗುವುದು ಎಂದು ಭಗವಂತ ಖೂಬ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು