ಇತ್ತೀಚಿನ ಸುದ್ದಿ
ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ: ನಂಜನಗೂಡಿನಲ್ಲಿ ಮಂಗಳೂರು ಪೊಲೀಸ್ ಕಾರ್ಯಾಚರಣೆ
26/08/2023, 10:32

ಮಂಗಳೂರು(reporterkarnataka.com): ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದರೆಯ ನಿವಾಸಿಯಾದ ರಾಜೇಶ್ ಅಲಿಯಾಸ್ ಜಗದೀಶ್ ಪೂಜಾರಿ( 37) ಎಂಬಾತ ಬಹಳ ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸುವಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮೈಸೂರು ನಂಜನಗೂಡು ಬಳಿ ವಾರಂಟ್ ಆರೋಪಿಯನ್ನು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.