ಇತ್ತೀಚಿನ ಸುದ್ದಿ
ಸಚಿವೆ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ
25/07/2021, 09:18
ಬೆಂಗಳೂರು(reporterkarnataka news): ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜಿಲ್ಲೆಯಾದ್ಯಂತ ಅವರ ನಿವಾಸಕ್ಕೆ ಮೊಟ್ಟೆ ಎಸೆದು ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ನಡೆಸಿರುವುದು ಸ್ಟಿಂಗ್ ಆಪರೇಷನ್ ನಲ್ಲಿ ಬಯಲಾಗಿತ್ತು. ಭ್ರಷ್ಟ್ರಾಚಾರದಲ್ಲಿ ತೊಡಗಿರುವ ಶಶಿಕಲಾ ಜೊಲ್ಲೆ ಅವರ ನಿವಾಸದ ಪ್ರವೇಶ ದ್ವಾರಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದರು.ಸಚಿವೆ ಜೊಲ್ಲೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಚಿವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.