10:38 PM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳ ಸೆರೆ; 7.83 ಲಕ್ಷದ ಸೊತ್ತು ವಶ

27/08/2023, 20:20

ಮಂಗಳೂರು(reporterkarnataka.com): ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕಾಟಿಪಳ್ಳದ ಶಾಕೀಬ್ ಯಾನೆ ಶಬ್ಬು(33) ಹಾಗೂ ಸುರತ್ಕಲ್ ಚೊಕ್ಕಬೆಟ್ಟುವಿನ ನಿಸಾರ್ ಹುಸೈನ್ ಯಾನೆ ನಿಚ್ಚು(34) ಎಂದು ಗುರುತಿಸಲಾಗಿದೆ.
ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ KA- 25-Z-2488 ನಂಬರಿನ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಮಾದಕ ವಸ್ತುವಾದ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳಿಂದ ಒಟ್ಟು 52 ಗ್ರಾಂ ತೂಕದ 2.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ವೋಕ್ಸ್ ವ್ಯಾಗನ್ ಕಾರು, ಎರಡು ಮೊಬೈಲ್ ಫೋನುಗಳು, 1,800 ರೂ. ನಗದು ಹಾಗೂ
ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 7,83,300/-ಆಗಬಹುದು ಎಂದು ಅಂದಾಜಿಸಲಾಗಿದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಶಾಕೀಬ್ ಯಾನೆ ಶಬ್ಬು ಎಂಬಾತನು ಈ ಹಿಂದೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆಯತ್ನ ಪ್ರಕರಣ,ಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮೂಡಬಿದ್ರಿ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣಗಳು ಹೀಗೆ ಒಟ್ಟು 13 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ.
ಇನ್ನೋರ್ವ ಆರೋಪಿ ನಿಸಾರ್ ಹುಸೈನ್ ಯಾನೆ ನಿಚ್ಚು ಎಂಬಾತನು ಈ ಹಿಂದೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಮಂಗಳೂರು ಪೂರ್ವ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಮಂಗಳೂರು ದಕ್ಷಿಣ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜ್ಯಾರಿಯಲ್ಲಿರುತ್ತದೆ. ಅಲ್ಲದೇ ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ಕೂಡಾ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದನು.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು