4:30 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ರೋಶನಿ ನಿಲಯದಲ್ಲಿ ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ

28/08/2023, 21:14

ಮಂಗಳೂರು(reporterkarnataka.com): ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ನಗರ ವೆಲೆನ್ಸಿಯಾ ರೋಶನಿ ನಿಲಯ ಕಾಲೇಜಿನಲ್ಲಿ ಭಾನುವಾರ ಜರುಗಿತು.


ಸೂರ್ಯಕಾಂತಿ ಫೌಂಡೇಶನ್ ಪಂಪವೆಲ್, ಕಮಿಷನ್ ಫಾರ್ ವಿಮೆನ್, ಕಮಿಷನ್ ಫಾರ್ ಹೆಲ್ತ್, ಝುಲೇಖ ಏನಾಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕಲಜಿ, ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ರಿ, ಏನಾಪೋಯ ಡೆಂಟಲ್ ಕಾಲೇಜ್ ಹಾಗೂ ಹಾಸ್ಪಿಟಲ್ ಇನ್ನರ್ ವೀಲ್ ಕ್ಲಬ್ ಆಫ್ ಮಂಗಳೂರು ಸೌತ್, ಯುವವಾಹಿನಿ (ರಿ.)ಕಂಕನಾಡಿ ಘಟಕ, ಬಿ ಎಸ್ ಡಬ್ಲ್ಯೂ ಅಂಡ್ ವಿಮೆನ್ ಸೆಲ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶಿನಿಲಯ ಸಹಬಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು
ವೇಣುಗೋಪಾಲ ಪುಚ್ಚಪಾಡಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನಿ ನಿಲಯ ಕಾಲೇಜಿನ ರಿಜಿಸ್ಟ್ರಾರ್ ಪ್ರೊ. ವಿನಿತಾ ರೈ, ಇನ್ನರ್ವೀಲ್ ಮಂಗಳೂರು ಸೌತ್ ಘಟಕ ಅಧ್ಯಕ್ಷೆ ಪ್ರಮೋದಾ ಸತೀಶ್, ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷ ಪೃಥ್ವಿರಾಜ್ ಎಂ., ಕ್ಯಾನ್ಸರ್ ತಜ್ಞ ಬೋನಿ ಪೌಲ್, ದಂತ ವೈದ್ಯಕೀಯ ವಿಜ್ಞಾನ ವಿಭಾಗದ ಡಾ. ರೇಖಾ ಶೆಣೈ ಉಪಸ್ಥಿತರಿದ್ದರು.
ಸೂರ್ಯಕಾಂತಿ ಫೌಂಡೇಶನ್ ಅಧ್ಯಕ್ಷೆ ವಿದ್ಯಾ ರಾಕೇಶ್ ಸ್ವಾಗತಿಸಿದರು. ಡಾ.ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೂರ್ಯಕಾಂತಿ ಫೌಂಡೇಶನ್ ಕಾರ್ಯದರ್ಶಿ ಸಾರಿಕಾ ಪೂಜಾರಿ ವಂದಿಸಿದರು.


ಸಂಪನ್ಮೂಲವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಐರಿನ್ ಬ್ರೆಸ್ಟ್ ಕ್ಯಾನ್ಸರ್ ಬಗ್ಗೆ ಹಾಗೂ ಒರಲ್ ಕ್ಯಾನ್ಸರ್ ಬಗ್ಗೆ ಡಾ. ರೇಖಾ ಶೆಣೈ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು