7:50 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ: ಗೃಹಲಕ್ಷ್ಮೀ ನೇರ ಪ್ರಸಾರ ಉದ್ಘಾಟನಾ ಸಮಾರಂಭದಲ್ಲಿ ಪ್ರವೀಣ್ ಚಂದ್ರ ಆಳ್ವ

30/08/2023, 16:14

ಚಿತ್ರ /ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ನುಡಿದಂತೆ ನಡೆದಿದೆ. ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಜಮೆ ಮಾಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಹರ್ಷ ವ್ಯಕ್ತಪಡಿಸಿದರು.


ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ನಗರದ ಕಂಕನಾಡಿ ಗರೋಡಿ ಸಮೀಪದ ಸರ್ವಮಂಗಳ ಸಭಾಂಗಣದಲ್ಲಿ ಬುಧವಾರ ಗೃಹಲಕ್ಷ್ಮೀ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.


ಬಡವರಿಗೆ ಸಹಾಯ ಮಾಡುವ ಯೋಜನೆಯಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿ ಕಾಣಲಿದೆ. ಬಡ ಕುಟುಂಬಗಳಿಗೆ ಪ್ರತಿ ತಿಂಗಳು 2 ಸಾವಿರ ಕೊಡುವುದರಿಂದ ರಾಜ್ಯದ ಸುಸ್ಥಿರ ಬೆಳವಣಿಗೆಯಾಗಲಿದೆ ಎಂದು ಪ್ರವೀಣ್ ಚಂದ್ರ ಆಳ್ವ ನುಡಿದರು.


ಈಗಾಗಲೇ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ದುಡಿಯುವ ಮಹಿಳೆಯರಿಗೆ ತುಂಬಾ ಪ್ರಯೋಜನವಾಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಉಚಿತ ಯೋಜನೆಗಳಿಂದ ಬಡ ವರ್ಗನ್ನು ಆರ್ಥಿಕ ವಾಗಿ ಮೇಲಕ್ಕೆತ್ತಲಿದೆ ಎಂದು ಅವರು ನುಡಿದರು.
ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದರು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 33 ಕೇಂದ್ರಗಳಲ್ಲಿ ಕಾರ್ಯಕ್ರಮ ನೇರ ಪ್ರಸಾರ ನಡೆಯಿತು.


ಇದಕ್ಕೆ ಮುನ್ನ ಕಂಕನಾಡಿ ಗರೋಡಿಯಲ್ಲಿ ಪ್ರವೀಣ್ ಚಂದ್ರ ಆಳ್ವ ಅವರ ನೇತೃತ್ವದಲ್ಲಿ ಮಹಿಳೆಯರ ಸಮ್ಮುಖದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ದೇವರಿಗೆ ಪೂಜೆ ಸಲ್ಲಿಸಲಾಯಿತು. ರಾಜ್ಯ ಕಾಂಗ್ರೆಸ್ ಸರಕಾರದ ಎಲ್ಲ ಭಾಗ್ಯ ಯೋಜನೆಗಳು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಯಿತು.



ಸರ್ವಮಂಗಳಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಪ್ರಭಾಕರ್ ಶ್ರೀಯಾನ್, ನೋಡಲ್ ಆಫೀಸರ್, ಜೂನಿಯರ್ ಇಂಜಿನಿಯರ್ ದೀಕ್ಷಿತಾ, ಬಿಲ್ ಕಲೆಕ್ಟರ್ ಕಾಶಿನಾಥ್, ಅಭಿಷೇಕ್, ಸ್ಥಳೀಯರಾದ ಲಕ್ಷ್ಮಿ ನಾಯರ್, ಚಂದ್ರಕಲಾ ಹೇಮಂತ್ಮೊ ಗರೋಡಿ ದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು