11:38 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಮನೆ ಬಾಡಿಗೆ ವಿಚಾರದಲ್ಲಿ ಯುವಕನ ಕೊಲೆ ಯತ್ನ: ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

30/08/2023, 18:19

ಮಂಗಳೂರು(reporterkarnataka.com): ನಗರದ ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಏನಿದು ಪ್ರಕರಣ?: ಆಗಸ್ಟ್ 12ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡು ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿ ನಮೀರ್ ಹಂಸನು ಕೃತ್ಯ ನಡೆಸಿದ ನಂತರ ತಲೆಮರೆಸಿಕೊಂಡಿದ್ದನು. ಆತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ನೆತ್ತಿಲಪದವು ನಿವಾಸಿ ನಮೀರ್ ಹಂಝ ಯಾನೆ ಸಮೀರ್ ಹಂಝ @ ದಾಸ್ (39) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಆರೋಪಿ ನಮೀರ್ ಹಂಸ ಎಂಬಾತನು ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಅಪಹರಣ, ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ರಾಜೇಂದ್ರ ಬಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು