10:24 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಬಂದು ಇಳಿಯಿತು ಮೊದಲ ವಿಮಾನ: ಪ್ರಥಮ ಯಾನ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್

31/08/2023, 22:08

ಬೆಂಗಳೂರು(reporterkarnataka.com): ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಇಂದು ಮೊದಲ ಬಾರಿಗೆ ವಿಮಾನ ಬಂದು ಇಳಿಯಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಇಂದು ಆರಂಭಗೊಂಡಿತು.

ಮಾಜಿ ಮುಖ್ಯಮಂತ್ರಿ ಶಿವಮೊಗ್ಗ ಜೆಲ್ಲೆಯವರೇ ಆದ ಬಿ.ಎಸ್. ಯಡಿಯೂರಪ್ಪ, ಸಚಿವ ಎಂ.ಬಿ. ಪಾಟೀಲ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರ, ವಿಜಯೇಂದ್ರ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಇನ್ನೂ ಹಲವರು ಶಿವಮೊಗ್ಗಕ್ಕೆ ತೆರಳುತ್ತಿರುವ ಮೊದಲ ವಿಮಾನ ಏರಿದರು.
ವಿಮಾನ ಹತ್ತುವ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಎಲ್ಲಾ ಗೌರವಗಳು ಇಲ್ಲಿನ ರೈತರಿಗೆ ಸಲ್ಲಬೇಕು. ಯಾವುದೇ ಅಡ್ಡಿ ಆತಂಕಗಳಿಲ್ಲದೆಯೇ ರೈತರು ಜಾಗ ಬಿಟ್ಟು ಕೊಟ್ಟ ಪರಿಣಾಮ ಶೀಘ್ರದಲ್ಲೇ ನಾವು ಏರ್ಪೋರ್ಟ್ ಮಾಡಲು ಸಾಧ್ಯವಾಯಿತು. ನಮಗೆ ಸಹಕಾರ ಕೊಟ್ಟ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಾವು ವಿಮಾನದಲ್ಲಿ ಇಬ್ಬರು ರೈತರನ್ನು ಕರೆದುಕೊಂಡು ಹೋಗುತ್ತಿದ್ದೇವೆ. ರೈತರ ಆಶೀರ್ವಾದದಿಂದಲೇ ಈ ಕೆಲಸ ಆಗಿದೆ ಎಂದರು.
ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಶಿವಮೊಗ್ಗಕ್ಕೆ ಮೊದಲ ವಿಮಾನ ಸೇವೆ ಪ್ರಾರಂಭವಾಗಿದೆ. ರಾಷ್ಟ್ರಕವಿ ಕುವೆಂಪು ಅವರು ಜನಿಸಿದ ಊರು ಶಿವಮೊಗ್ಗ ಆಗಿರುವುದರಿಂದ ಕುವೆಂಪು ವಿಮಾನ ನಿಲ್ದಾಣವೆಂದೇ ಹೆಸರಿಟ್ಟಿದ್ದೇವೆ. ಒಟ್ಟಾರೆಯಾಗಿ ಇದೊಂದು ಐತಿಹಾಸಿಕ ಕ್ಷಣ. ವಿಮಾನ ಆರಂಭದಿಂದ ಮಧ್ಯ ಕರ್ನಾಟಕಕ್ಕೆ ಬಹಳಷ್ಟು ಅನುಕೂಲವಾಗಲಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು