8:28 AM Thursday1 - January 2026
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಸಕಲೇಶಪುರ ಬಳಿ ಕಾಡಾನೆ ದಾಳಿ: ಅರಣ್ಯ ಇಲಾಖೆಯ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಮೃತ್ಯು

31/08/2023, 22:15

ಸಕಲೇಶಪುರ(reporterkarnataka.com): ಕಾಡಾನೆ ದಾಳಿಗೆ ಅರವಳಿಕೆ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ.
ಕಾದಾಟದಲ್ಲಿ ಗಾಯಗೊಂಡಿರುವ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೆಂಕಟೇಶ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಕಲೇಶಪುರದ ಆಲೂರುನಲ್ಲಿ ಗಾಯಗೊಂಡು ತಿರುಗಾಡುತ್ತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ಆರಂಭಿಸಿದ್ದರು. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಶೂಟ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಏಕಾಏಕಿ ನುಗ್ಗಿ ಬಂದ ಕಾಡಾನೆ ವೆಂಕಟೇಶ್ ಅವರನ್ನು ತುಳಿದು ಹಾಕಿದೆ. ಗಂಭೀರ ಗಾಯಗೊಂಡಿದ್ಧ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು