ಇತ್ತೀಚಿನ ಸುದ್ದಿ
ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್ ಶಿಫ್ಟ್: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ
31/08/2023, 22:41

ಬೆಂಗಳೂರು(reporterkarnataka.com): ವಿದೇಶದಿಂದ ಆಗಮಿಸಿದ ಬೆನ್ನಲ್ಲೇ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಿ ನಿಗಾ ವಹಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.