ಇತ್ತೀಚಿನ ಸುದ್ದಿ
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ
02/09/2023, 19:57
ಹಾಸನ(reporterkarnataka.com): ಚುನಾವಣಾ ಅಕ್ರಮ ಆರೋಪದ ಮೇಲೆ ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರು ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಪ್ರಜ್ವಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಗೊಳಿಸಿ, ಅವರು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿತ್ತು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ತಯಾರಿ ನಡೆಸಿದ್ದಾರೆ.
ಸೋಮವಾರವೇ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಮುಂದಾಗಿದ್ದಾರೆ. ತಾತ ಮಾಜಿ ಪ್ರಧಾನಿ ದೇವೇಗೌಡರು, ತಂದೆ ಮಾಜಿ ಸಚಿವ ರೇವಣ್ಣ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರಾವಣ ಮಾಸದ ಪೂಜೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಅವರು ನಿನ್ನೆಯೇ ಹುಟ್ಟೂರಿಗೆ ಆಗಮಿಸಿದ್ದಾರೆ. ಸದ್ಯ ಇಂದು ಪೂಜೆ ಬಳಿಕ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.