2:12 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಡ್ರಗ್ ಕಿಂಗ್ ಪಿನ್ ನೈಜೀರಿಯ ಮಹಿಳೆಯ ಬಂಧನ; 20 ಲಕ್ಷ ಮೌಲ್ಯದ ಎಂಡಿಎಂಎ ವಶ

02/09/2023, 20:51

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಎಂಡಿಎಂಎ( Synthetic Drug) ಸಹಿತ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ನೈಜೀರಿಯಾದ ಅಡೆವೊಲೆ ಅಡೆಟುಟು ಆನು ಯಾನೆ ರೆಜಿನಾ ಜರಾ ಯಾನೆ ಆಯಿಶಾ(33) ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಜಕ್ಕೂರು ಸಮೀಪದ ಫ್ಲ್ಯಾಟ್ ನಲ್ಲಿ ವಾಸವಾಗಿದ್ದಳು.
ಸಿಸಿಬಿ ಪೊಲೀಸರು ಇತ್ತೀಚೆಗಿನ ದಿನಗಳಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಪ್ರಮುಖ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದರು. ಈ ಡ್ರಗ್ ದಂಧೆಯ ಕಿಂಗ್ ಪಿನ್ ನ್ನು ಪತ್ತೆ ಹಚ್ಚುವ ಸಲುವಾಗಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿದ ಸಮಯ ಈ ಮಾದಕ ವಸ್ತುಗಳನ್ನು ಆರೋಪಿಗಳಿಗೆ ನೈಜಿರಿಯಾ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ವಿದೇಶಿ ಮಹಿಳೆಯೋರ್ವಳು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಮಾದಕ ವಸ್ತುವನ್ನು ಹೊಂದಿದ ಆರೋಪದ ಮೇಲೆ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿ ಮಹಿಳೆಯಿಂದ ಒಟ್ಟು 400 ಗ್ರಾಂ ತೂಕದ 20 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಐಫೋನ್, 2910 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910/-ಆಗಬಹುದು ಎಂದು ಅಂದಾಜಿಸಲಾಗಿದೆ.
ಈಕೆಯು ನೈಜೇರಿಯಾ ದೇಶದ ಪ್ರಜೆಯಾಗಿದ್ದು, ವ್ಯಾಸಂಗ ವೀಸಾದಡಿಯಲ್ಲಿ ಭಾರತಕ್ಕೆ ಬಂದು ವಿದ್ಯಾಭ್ಯಾಸ ಮಾಡಿಕೊಂಡು ನಂತರ ಇಲ್ಲಿ ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದಳು ಈ ನರ್ಸಿಂಗ್ ಕೆಲಸವನ್ನು ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದು, ಈಕೆಯ ವಿರುದ್ಧ ಪ್ರಸ್ತುತ ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಈ 7 ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತುವನ್ನು ಖರೀದಿಸಿರುವುದಾಗಿದೆ. ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು