12:40 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ, ವಾಹನ ಜಾಥಾ

02/09/2023, 22:21

ಬೆಳ್ತಂಗಡಿ(reporterarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಸೌಜನ್ಯ ಪರ ಸೆ.3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದ ವಿವಿಧಡೆಗಳಿಂದ ಲಕ್ಷಾಂತರ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ನಡುವೆ ಪ್ರತಿಭಟನೆ ರದ್ದಾಗಿದೆ ಎಂಬ ವದಂತಿಯನ್ನು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರಾಕರಿಸಿದ್ದಾರೆ. ಸೆ. 3ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆದೇ ಸಿದ್ದ. ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನಾಳೆಯ ಸಭೆ ರದ್ದಾಗಿಲ್ಲ. ಕೆಲವರು ಜನರ ದಾರಿ ತಪ್ಪಿಸಲು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಲ್ಲರೂ ಆಗಮಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಸೌಜನ್ಯಾ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ನಡೆಯುವ ಈ ಪ್ರತಿಭಟನೆಯಲ್ಲಿ ಒಕ್ಕಲಿಗ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ, ಹಿಂದೂ ಸಂಘಟನೆಯ ನಾಯಕ ಪ್ರಮೋದ್ ಮುತಾಲಿಕ್ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆ
ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿದೆ.
ವಾಹನ ಜಾಥಾ ಕೂಡ ನಡೆಯಲಿದೆ.
ವಾಹನ ಜಾಥಾ: ನಾರಾವಿ-ಬೆಳ್ತಂಗಡಿ ಬೆಳಗ್ಗೆ 9 ಗಂಟೆ, ಕುತ್ತೂರು-ಬೆಳ್ತಂಗಡಿ ಬೆಳಗ್ಗೆ 9.10, ಸುಲ್ಕೇರಿ-ಬೆಳ್ತಂಗಡಿ ಬೆಳಗ್ಗೆ 9.15, ಪಿಲ್ಯ-ಬೆಳ್ತಂಗಡಿ ಬೆಳಗ್ಗೆ 9.20, ಅಳದಂಗಡಿ-ಬೆಳ್ತಂಗಡಿ ಬೆಳಗ್ಗೆ 9.30ಕ್ಕೆ ವಾಹನ ಜಾಥಾ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು