7:48 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ

25/07/2021, 18:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ.

ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಅವರು ಈ ಬಾರಿ ಬಸವನಗೌಡ ತುರುವಿಹಾಳ ಅವರನ್ನು ಕೈಹಿಡಿದಿದ್ದಾರೆ ಎಂದು ಸಿಂಧನೂರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ವಿರುಪಾಪುರ ಗ್ರಾಮದಲ್ಲಿ ನೂತನ ಶಾಸಕರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ತುರುವಿಹಾಳ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಕಾರ್ಯಕರ್ತರು ಪ್ರತಿಯೊಂದು ಹಳ್ಳಿಗೆ ಹೋಗಿ ಮತದಾರರನ್ನು ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲಿನ ಸ್ಥಿತಿಗತಿಗಳು ತಿಳಿದುಕೊಂಡು ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಸ್ಕಿ ಕ್ಷೇತ್ರದ ದಿಕ್ಸೂಚಿ ಬದಲಾಯಿಸಿದ್ದಾರೆ. ಕೈಹಿಡಿದ ಮತದಾರರನ್ನು ನಾವು ಸ್ಮರಿಸಬೇಕು ಎಂದು ಬಾದರ್ಲಿ ಹೇಳಿದರು.

ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ,ನಿಮ್ಮ ಋಣವನ್ನು ನಾನು ತೀರಿಸುತ್ತೇನೆ. ನಿಮ್ಮ ಸಮಸ್ಯೆಗಳು ಸ್ಪಂದಿಸುತ್ತೇನೆ. ನನ್ನ ಮತದಾರರ ಅಭಿಮಾನಿಗಳೇ ನನ್ನ ದೇವರು ಎಂದರು.

ಸಿಂಧನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ವರ ಮಾತನಾಡಿ, ಹಲವರ ಪರಿಶ್ರಮದಿಂದ, ಜನರ ಬೆಂಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾರರನ್ನು ನಾವು ಸ್ಮರಿಸಲೇಬೇಕು. ಮುಂದಿನ ಬಾರಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಗುರಿ. ಮತದಾರರನ್ನು ನಾವು ಯಾವತ್ತು ಕೈಬಿಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು